ಮಂಗಳೂರು ಗೋಡೆ ಬರಹ ಪ್ರಕರಣ : ಇಂದು ಆರೋಪಿಗಳು ಕೋರ್ಟ್ ಗೆ ಹಾಜರು

ಮಂಗಳೂರು : ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

ಗೋಡೆ ಬರಹ ಪ್ರಕರಣದಲ್ಲಿ ಬಂಧಿತರಾಗಿರುವ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರು ಮೂಲದ ಮಾಝ್ ಮುನೀರ್ (21) ಹಾಗೂ ಮುಹಮ್ಮ ಶಾರೀಕ್ (22) ಎಂಬಿಬ್ಬರನ್ನು ಭಾನುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ಕೊರೊನಾ ತಪಾಸಣೆ ಹಿನ್ನೆಲೆಯಲ್ಲಿ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಇಂದು ಕೊರೊನಾ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಇಂದು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.