ರೈತರ ಹೋರಾಟಕ್ಕೆ ಕೈ ಜೋಡಿಸಿದ `WWE’ ಚಾಂಪಿಯನ್ ದಿ ಗ್ರೇಟ್ ಖಲಿ

ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಗಳನ್ನು ರದ್ದುಮಾಡಬೇಕು ಎಂದು ಒತ್ತಾಯಿಸಿ ದೆಹಲಿ ಸುತ್ತ ಮುತ್ತ ಸಾವಿರಾರು ರೈತರು ಪಂಜಾಬ್ ಮತ್ತು ಹರಿಯಾಣಾ ದಿಂದ ಆಗಮಿಸಿದ್ದ ಸಾವಿರಾರು ರೈತರನ್ನು ಬೆಂಬಲಿಸಲು ವೃತ್ತಿಪರ ಕುಸ್ತಿಪಟು ದಲಿಪ್ ಸಿಂಗ್ ರಾಣಾ ( WWE ಮಾಜಿ ಚಾಂಪಿಯನ್ ಗ್ರೇಟ್ ಖಾಲಿ) ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂನಲ್ಲಿ ವಿಡಿಯೋ ಹೇಳಿಕೆ ನೀಡಿರುವ ರಾಣಾ, ದೇಶದ ಜನರು ಪ್ರತಿಭಟನಾ ನಿರತ ರೈತರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ದಿನಗೂಲಿ ನೌಕರರು, ರಸ್ತೆ ಬದಿ ವ್ಯಾಪಾರಿಗಳಿಗೆ ಈ ಕಾನೂನುಗಳು ಮಾರಕವಾಗಲಿದೆ. ಮತ್ತು ಸಾಮಾನ್ಯ ಜನರು ತೊಂದರೆಅನುಭವಿಸುತ್ತಾರೆ. ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ರೈತರ ನೆರವಿಗೆ ಎಲ್ಲರೂ ಮನವಿ ಮಾಡುತ್ತೇನೆ’ ಎಂದು ಹೇಳಿದರು.