ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಲಂಡನ್’ನಲ್ಲೂ ಭುಗಿಲೆದ್ದ ಪ್ರತಿಭಟನೆ

ಲಂಡನ್: ಭಾರತ ಸರ್ಕಾರದ ಕೃಷಿ ಸುಧಾರಣಾ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಲಂಡನ್ ನಲ್ಲಿ ಭಾರೀ ಪ್ರತಿಭಟನೆ ನಡೆಸಲಾಗಿದೆ.

ಕೊರೋನ ನಿಯಮ ಉಲ್ಲಂಘಿಸಿದ್ದಕ್ಕಾಗಿ ಹಲವು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಭಾರತೀಯ ದೂತವಾಸ ಕಚೇರಿ ಎದುರು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಗುಂಪುಗೂಡಿ ರೈತರ ಬೇಡಿಕೆ ಈಡೇರಿಸಬೇಕೆಂದು ಹೋರಾಟ ನಡೆಸಿದ್ದು ಕಚೇರಿಗೆ ಬಿಗಿಭದ್ರತೆ ಒದಗಿಸಲಾಗಿದ್ದು ಸಾವಿರಾರು ಪೊಲೀಸರನ್ನು ಬಂದೋ ಬಸ್ತ್ ಗೆ ನಿಯೋಜನೆ ಮಾಡಲಾಗಿದೆ.

ರೈತರಿಗೆ ನ್ಯಾಯ ಬೇಕು- ನ್ಯಾಯ ಸಿಗಲೇಬೇಕು ಎಂಬ ಭಿತ್ತಿಪತ್ರ ಫಲಕ ಸೇರಿದಂತೆ ಹಲವು ಬಗೆಯ ಘೋಷಣಾ ಫಲಕ ಹಿಡಿದು ಪ್ರತಿಭಟನೆ ನಡೆಸಲಾಗಿದೆ. ಕೋವಿಡ್ ನಿಯಮ ಉಲ್ಲಂಘನೆಯ ಆರೋಪದ ಮೇರೆಗೆ ಹಲವು ರೈತ ಪರ ಹೋರಾಟಗಾರರನ್ನು ಬಂಧಿಸಲಾಗಿದೆ ಎಂದೂ ವರದಿಯಾಗಿದೆ.